– ಜಿಲ್ಲಾ ಕ್ರೀಡಾ ವಸತಿ ಶಾಲೆಗೆ ಬ್ಯಾಲಿಹಾಳ ವಿದ್ಯಾರ್ಥಿಗಳ ಆಯ್ಕೆ..!

 

 

 

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಬ್ಯಾಲಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಕ್ರೀಡಾ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ..!
ಬ್ಯಾಲಿಹಾಳ ಶಾಲೆಯ ನವೀನಕುಮಾರ (ವಾಲಿಬಾಲ್) ಹಾಗೂ ಮುತ್ತಪ್ಪ (ಅಥ್ಲೆಟಿಕ್ಸ್) ವಿಭಾಗಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಆಯ್ಕೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ಲಕ್ಕಲಕಟ್ಟಿ ಸೇರಿದಂತೆ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಪಾಲಕರು ಮುಖ್ಯಗುರುಗಳು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ..!!