– ಇನ್ನೂ ಒಂದು ವಾರ ಮಳೆ ಸುರಿಯುವ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು..!

– ಶರಣಪ್ಪ ಕುಂಬಾರ

ಕೊಪ್ಪಳ : ಜಿಲ್ಲೆಯಾದ್ಯಂತ ಇನ್ನೂ ಒಂದು ವಾರ ಮಳೆ ಸುರಿಯಲಿದೆ ಎಚ್ಚರಿಕೆವಹಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ ಅವರು ಸೂಚನೆ ನೀಡಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಈ ಸಲಹೆ ನೀಡಲಾಗಿದೆ. ಜಿಲ್ಲೆಯ ತುಂಗಭದ್ರಾ ಜಲಾಶಯದ ಮೂಲಕ ಒಂದು ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನದಿ ಪಾತ್ರದ ಜನರು ಎಚ್ಚರಿಕೆವಹಿಸಬೇಕೆಂದು ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ 7 ತಾಲ್ಲೂಕ ಕೇಂದ್ರಗಳಲ್ಲಿ ತೆರೆಯಲಾದ ಸಹಾಯವಾಣಿ ನಂಬರಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ..!!