– ಶರಣಪ್ಪ ಕುಂಬಾರ.
ಕೊಪ್ಪಳ : ರಾಜ್ಯ ಚುನಾವಣಾ ಆಯೋಗವು ಜಿಲ್ಲೆಯ 30 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಹಾಗೂ ಒಟ್ಟು 7 ತಾಲೂಕಿನ 100 ತಾಲೂಕಾ ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಿ ಆದೇಶ ಹೊರಡಿಸಿದೆ.
ಅಲ್ಲದೇ, ಮೀಸಲಾತಿ ಪ್ರಕಟಿಸಿದ 7 ದಿನಗಳೊಳಗಾಗಿ ಅಂದರೆ, 08-07-2021 ಮುನ್ನ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಂ.ಪಿ.ರಂಜಿತಾ ರಾಜ್ಯ ಪತ್ರದಲ್ಲಿ ಆದೇಶಿಸಿದ್ದಾರೆ.