ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ ನಿವಾಸಿ ಹಿರೇನಂದಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ತಿಪ್ಪಣ್ಣ ರಾಮದುರ್ಗ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ) ಪದವಿ ನೀಡಿದೆ.
ಶಿವಮೊಗ್ಗದ ಡಿ.ವಿ.ಎಸ್. ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಮತ್ತು ಸಂಶೋಧಕ ಡಾ.ಎಂ. ವೆಂಕಟೇಶ ಅವರ ಮಾರ್ಗದರ್ಶನದಲ್ಲಿ “ಪಶುಪಾಲನಾ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು (ಕೊಪ್ಪಳ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಅವರು ಮಂಡಿಸಿದ ಮಹಾಪ್ರಬಂಧವನ್ನು ವಿಶ್ವವಿದ್ಯಾಲಯ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್.ಡಿ) ಪದವಿಗೆ ಮಾನ್ಯ ಮಾಡಿದೆ.
ಜನೇವರಿ 10-2024ರಂದು ನವರಂಗ ಬಯಲು ರಂಗಮಂದಿರದಲ್ಲಿ ನಡೆದ ನುಡಿ ಹಬ್ಬ 32ರ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ ಅವರು ಪಿಎಚ್.ಡಿ. ಪದವಿಯನ್ನು ಪ್ರಧಾನ ಮಾಡಿ ಗೌರವಿಸಿದ್ದಾರೆ.
ತಿಪ್ಪಣ್ಣ ರಾಮದುರ್ಗ ಅವರಿಗೆ ಪಿಎಚ್.ಡಿ ಪದವಿ ಲಭಿಸಿದ್ದಕ್ಕೆ ಅನೇಕರು ಸಂತಸ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.