ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಹಾಗೂ ಕುಷ್ಟಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬಿಎ ಅಂತಿಮ ವರ್ಷದ ಕಲಾ ಪದವೀಧರ ವಿದ್ಯಾರ್ಥಿನಿಯರಿಬ್ಬರು 4 ಮತ್ತು 6ನೇ ರ‍್ಯಾಂಕ್ ಪಡೆದು ಗಮನಸೆಳೆದಿದ್ದಾರೆ.
ಈ ಕುರಿತು ಕುಷ್ಟಗಿ ಕಾಲೇಜು ಪ್ರಾಚಾರ್ಯ ಡಾ.ಎಸ್.ವಿ.ಡಾಣಿ ಅವರು ಬುಧವಾರ ಸಂಜೆ 4.30ರ ಸುಮಾರಿಗೆ ಮಾಧ್ಯಮ ಕ್ಕೆ ಮಾಹಿತಿ ನೀಡಿ, ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ನಡೆಸಿದ 2022-23ನೇ ಸಾಲಿನ ಬಿ.ಎ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಕುಷ್ಟಗಿ ಕಾಲೇಜಿನ ವಿದ್ಯಾರ್ಥಿನಿ ಮಾಸವ್ವ ಮಾಲಪ್ಪ ಹೊಟ್ಟಿ 6ನೇ ರ‍್ಯಾಂಕ್ ಹಾಗೂ ತಾವರಗೇರಾ ಕಾಲೇಜಿನ ವಿದ್ಯಾರ್ಥಿನಿ ಆಯಿಶಾ ನಬಿಸಾಬ 4ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿಧಾನಸಭಾ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಹೆಚ್.ಪಾಟೀಲ್ ಕುಷ್ಟಗಿ ಮತ್ತು ತಾವರಗೇರಾ ಕಾಲೇಜು ಪ್ರಾಚಾರ್ಯ ಹಾಗೂ ಸಹಾಯಕ ಪ್ರಾಧ್ಯಾಪಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.