ಕುಷ್ಟಗಿ ತಹಸೀಲ್ದಾರ್ ಆಗಿ ರವಿ ಎಸ್. ಅಂಗಡಿ ಅಧಿಕಾರ ಸ್ವೀಕಾರ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಂಡ ರಾಯಚೂರು ಜಿಲ್ಲೆಯ ಸಿರವಾರ ತಹಸೀಲ್ದಾರ್ ರವಿ ಎಸ್. ಅಂಗಡಿ ಅವರು ಬುಧವಾರ ಜಿಲ್ಲೆಯ ಕುಷ್ಟಗಿ ತಹಸೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದರು.

ಗ್ರೇಡ್-2 ತಹಸೀಲ್ದಾರ್ ಮುರಳೀಧರ ಮುಕ್ತೆದಾರ ಅವರು, ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿಕೊಂಡು ಅಧಿಕಾರ ಹಸ್ತಾಂತರಿಸಿದರು. ಈ ವೇಳೆ ಶಿರಸ್ಥೆದಾರರಾದ ಸತೀಶ, ವಿಜಯಾ, ಕಂದಾಯ ನಿರೀಕ್ಷಕ ಅಬ್ದುಲ್ ರಜಾಕ್, ಉಮೇಶಗೌಡ ಸೇರಿದಂತೆ ಕಂದಾಯ ಇಲಾಖೆ ನೌಕರರು, ಸಿಬ್ಬಂದಿ ವರ್ಗ ಹಾಜರಿದ್ದರು.

ಕುಷ್ಟಗಿ ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡರ ಅವರು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿಗೆ ವರ್ಗಾವಣೆಯಾಗಿದ್ದಾರೆ.