ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: 2022-23 ನೇ ಸಾಲಿನ ಫಸಲ್ ಬೀಮಾ ಯೋಜನೆ ಅಡಿಯಲ್ಲಿ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಂದ ಅಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರು ಬುಧವಾರ ಸಂಜೆ 6.30ರ ಸುಮಾರಿ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಬೆಳೆ ವಿಮೆ ನೋಂದಾಯಿತ ಅರ್ಜಿಯೊಂದಿಗೆ ತಾಳೆಯಾಗದೇ ಇರುವ ಪ್ರಸ್ತಾವನೆಗಳನ್ನು ಸಂಬಂಧಿಸಿದ ತಾಲ್ಲೂಕ (ಕೃಷಿ ತೋಟಗಾರಿಕೆ) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತತ್ರಾಂಶದ ಮೂಲಕ ಕಳುಹಿಸಲಾಗಿತ್ತು. ವಿಮಾ ಸಂಸ್ಥೆಯಿಂದ ಮುಂಗಾರು ಹಂಗಾಮಿನಲ್ಲಿ 2450, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ 210, ಪ್ರಸ್ತಾವನೆಗಳು ತಿರಸ್ಕೃತಗೊಂಡಿವೆ. ಈ ಪಟ್ಟಿಯನ್ನು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯಕ ಸೂಚನಾ ಫಲಕದಲ್ಲಿ ಅಳವಡಿಸಲಾಗಿದೆ. ರೈತರು ಫೆಬ್ರುವರಿ-15 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.