ಹನುಮನಾಳ: ಗಮನಸೆಳೆದ ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಹಾಂತೇಶ ಚಕ್ರಸಾಲಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳ ಹೋಬಳಿ ಕೇಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೊಡುಗೆ ಸಮಾರಂಭ ನಡೆಯಿತು. ಮಹಾಸರಸ್ವತಿ ಪೂಜೆ ನಡೆಸಿ ಶ್ರೀರಕ್ಷೆಯೊಂದಿಗೆ ವಿದ್ಯಾರ್ಥಿಗಳಿಗೆ ವಿಶಿಷ್ಟವಾಗಿ ಬೀಳ್ಕೊಟ್ಟಿರುವುದು ಗಮನಸೆಳೆಯಿತು.

ಈವೊಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಲೇಖಕಿಯರ ಸಂಘದ ಕೊಪ್ಪಳ ಶಾಖೆಯ ಪ್ರಧಾನ ಕಾರ್ಯದರ್ಶಿ ಕವಯಿತ್ರಿ ಸಾವಿತ್ರಿ ಮುಜಮುದಾರ ಅವರು ಮಾತನಾಡಿ, ವಿದ್ಯಾರ್ಥಿಗಳು ಚೆನ್ನಾಗಿ ಓದುವ ಮೂಲಕ ಅಂಕಗಳನ್ನು ಪಡೆಯಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ಜೀವನವನ್ನು ಸುಂದರವಾಗಿ ಇರಿಸಿಕೊಳ್ಳಬೇಕು ಎಂದ ಅವರು, ತಾವು ವೃತ್ತಿ ಸೇವೆಯನ್ನು ಪಡೆಯಲು ಶ್ರಮಪಟ್ಟ ಬಗ್ಗೆ ತಮ್ಮ ವೃತ್ತಿ ಜೀವನದ ಬಗ್ಗೆ ಅನುಭವಗಳನ್ನು ಹಂಚಿಕೊಂಡರು. ಶಿಕ್ಷಣದಿಂದ ವಂಚಿತರಾದ ಗ್ರಾಮೀಣ ಮಕ್ಕಳನ್ನು ಜಾಗೃತಗೊಳಿಸುವುದು ತಮ್ಮ ಉದ್ಧೇಶವಾಗಿದೆ ಎಂದು ಹೇಳಿದರು.

ಕನ್ನಡ ಉಪನ್ಯಾಸಕ ಸುಭಾಷ್ ಅವರು ವಾರ್ಷಿಕ ವರದಿ ಮಂಡಿಸಿದರು.
ಇದೇ ವೇಳೆ 2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳಿಸಿದ ವಿದ್ಯಾರ್ಥಿನಿಯರನ್ನು ಹಾಗೂ ಪ್ರಥಮ ಪಿಯುಸಿಯಲ್ಲಿ ಉತ್ತೀರ್ಣರಾಗಿ ಪ್ರಥಮ, ದ್ವಿತೀಯ ಹಾಗು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು.

ಬಳಿಕ ವಿದ್ಯಾರ್ಥಿಗಳಿಂದ ರಸಮಂಜರಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪ್ರಭಾರ ಪ್ರಾಚಾರ್ಯ ಸಂಜಯ್ ಬಡಿಗೇರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಚಾರ್ಯ ಕೆ ಬಿ ತಳವಾರ, ಪ್ರೌಢಶಾಲಾ ಹಿರಿಯ ಶಿಕ್ಷಕ ಅಡಿವೆಪ್ಪ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಹನುಮಂತಪ್ಪ ಮಾಲಗಿತ್ತಿ ಉಪಸ್ಥಿತರಿದ್ದರು. ಈ ವೇಳೆ ಉಪನ್ಯಾಸಕರಾದ ಸುಭಾಷ್ ಗೌಡ್ರು, ಕುಮಾರಿ ಉಮಾದೇವಿ, ಪಾರ್ವತಿ, ಶರಣಪ್ಪ ಪೂಜಾರ ಹಾಗೂ ಕಾಲೇಜಿನ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಕುಮಾರಿ ಕಾವೇರಿ ರೊಟ್ಟಿ ಹಾಗೂ ಕುಮಾರಿ ಮಂಜುಳಾ ಕಾರ್ಯಕ್ರಮ ನಿರ್ವಹಿಸಿದರು. ಮಲ್ಲಿಕಾರ್ಜುನ ಕಮಲದಿನ್ನಿ ಸ್ವಾಗತಿಸಿದರು. ಕುಮಾರಿ ಶಿವಗಂಗಾ ಮುಷ್ಟಿಗೇರಿ ವಂದಿಸಿದರು.

One thought on “ಹನುಮನಾಳ: ಗಮನಸೆಳೆದ ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Comments are closed.