ಕಾರು ಲಾರಿ ನಡುವೆ ರಸ್ತೆ ಅಪಘಾತ, ಕಾರು ಚಾಲಕ ಗಂಭೀರ ಗಾಯ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ವಣಗೇರಿ ಟೋಲ್ ಪ್ಲಾಜಾ ಸಮೀಪದ ರಾಷ್ಟ್ರೀಯ ಚತುಷ್ಪಥ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಲಾರಿ ಮತ್ತು ಕಾರು ನಡುವೆ ರಸ್ತೆ ಅಪಘಾತ ಸಂಭವಿಸಿದೆ.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಔಷಧಿ ತುಂಬಿದ ಲಾರಿಯೊಂದು ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸುತ್ತಿರುವ ವೇಳೆ ಅದೇ ಮಾರ್ಗವಾಗಿ ರಾಜಸ್ಥಾನ ಕಡೆಯಿಂದ ಕಾರೊಂದು ಬೆಂಗಳೂರಿಗೆ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ರಕ್ತಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ದಾವಿಸಿದ 112 ಪೊಲೀಸರು ಗಾಯಾಳುಗಳನ್ನು ತಕ್ಷಣ ಹೈವೇ ಆಂಬ್ಯುಲೆನ್ಸ್ ಮೂಲಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಣ ರಕ್ಷಿಸಿದ್ದಾರೆ. ಈ ಕುರಿತು ಪೊಲೀಸರು ವಿಚಾರ ನಡೆಸುತ್ತಿದ್ದಾರೆ.