ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಜಿಲ್ಲೆಯ ಕುಷ್ಟಗಿ ಪಟ್ಟಣದ 3 ಕೇಂದ್ರಗಳಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಮೊದಲ ದಿವಸ ಕನ್ನಡ ವಿಷಯ ಪತ್ರಿಕೆ ಪರೀಕ್ಷೆ ವಿದ್ಯಾರ್ಥಿಗಳು ಎದುರಿಸಿದರು.
ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಪರೀಕ್ಷೆಗೆ ನೋಂದಣಿಯಾದ 1,642 ಪೈಕಿ 1,576 ವಿದ್ಯಾರ್ಥಿಗಳು ಮೊದಲ ಕನ್ನಡ ಪ್ರಶ್ನೆಪತ್ರಿಕೆ ಪರೀಕ್ಷೆ ಬರೆದರು, 66 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ, ಭದ್ರತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಸಿಸಿ ಕ್ಯಾಮೆರಾ ಕಣ್ಗಾವಲಿನ ವ್ಯವಸ್ಥೆ ನಿಯೋಜಿಸಲಾಗಿತ್ತು.
ಮೂರು ಪರೀಕ್ಷಾ ಕೇಂದ್ರಗಳಲ್ಲಿನ ಹಾಜರಾತಿ ಹೀಗಿದೆ..
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾದ 667 ಪೈಕಿ 642 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ 25 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾದ 570 ಪೈಕಿ 553 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ 17 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಅನ್ನದಾನೇಶ್ವರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನೋಂದಣಿಯಾದ 405 ಪೈಕಿ 381 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರೆ 24 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.