ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತೀವ್ರ ಪೆಟ್ಟಾಗಿ ಸ್ವಂತೂರಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ.
ನಿವೃತ್ತಿ ಅಂಚಿನಲ್ಲಿದ್ದ ಜಮಖಂಡಿ ಮೂಲದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಮಾಂಗ ಮೃತ ದುರ್ದೈವಿ. ಇವರು ತಾಲೂಕಿನ ಶಿರಗುಂಪಿ ಗ್ರಾಮ ಪಂಚಾಯಿತಿಯಲ್ಲಿ ಸೇವೆಯಲ್ಲಿದ್ದರು. ಇತ್ತೀಚೆಗಷ್ಟೇ ಹೆಚ್ಚುವರಿಯಾಗಿ ಚಳಗೇರಾ ಗ್ರಾಮ ಪಂಚಾಯಿತಿ ನೋಡಿಕೊಳ್ಳುತ್ತಿದ್ದರು. ಶಿರಗುಂಪಿ ಗ್ರಾಮ ಪಂಚಾಯಿತಿಗೆ ಕರ್ತವ್ಯಕ್ಕೆ ತೆರಳುತಿದ್ದ ಸಂದರ್ಭದಲ್ಲಿ ಅಪರಿಚಿತ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕಳೆದ ಎರಡು ವಾರದಿಂದ ಚಿಕಿತ್ಸೆ ಪಡೆದು ತಮ್ಮ ಸ್ವಂತೂರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ, ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಶಿರಗುಂಪಿ ಹಾಗೂ ಚಳಗೇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳು, ನೌಕರರು, ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಮೃತ ಯಲ್ಲಪ್ಪ ಮಾಂಗ ಅವರ ನಿಧಾನಕ್ಕೆ ಕಂಬನಿ ಮಿಡಿದಿದ್ದಾರೆ.