ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ : ಜಿಲ್ಲೆಯ ಕುಷ್ಟಗಿ ಸಮೀಪದ ರಾಷ್ಟ್ರೀಯ ಚತುಷ್ಪಥ ಹೆದ್ದಾರಿ ಮಾಟಲದಿನ್ನಿ ಬ್ರಿಜ್ ಬಳಿ ಲಾರಿ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಸಂಭವಿಸಿದೆ.
ಯಲಬುರ್ಗಾ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮದ ಬಸವರಾಜ ಭಜಂತ್ರಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು,. ರಾಷ್ಟ್ರೀಯ ಚತುಷ್ಪಥ ಹೆದ್ದಾರಿ ಮಾಟಲದಿನ್ನಿ ಬ್ರಿಡ್ಜ್ ಡಿವೈಡರ್ ಹತ್ತಿರ ಬೈಕ್ ಸವಾರರು ಲಾರಿಯ ಚಕ್ರದಲಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವನ ಕಾಲು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಘಟನಾ ಸ್ಥಳಕ್ಕೆ ಬೇವೂರು ಪೊಲೀಸ್ ಠಾಣಾಧಿಕಾರಿಗಳು ಭೇಟಿನೀಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.