ಮಹಾಂತೇಶ ಚಕ್ರಸಾಲಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ : ಬಿಜೆಪಿ ಜಿಲ್ಲಾ ಯುವ ಮೋರ್ಚಾದ ನೂತನ ಕಾರ್ಯದರ್ಶಿಯನ್ನಾಗಿ ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದ ರೋಹಿತ್ ಮಲ್ಲಾಡದ ಅವರನ್ನು ನೇಮಕ ಮಾಡಲಾಗಿದೆ.!
ಈ ಕುರಿತು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ
ಮೌನೇಶ ದಢೇಸೂಗೂರು ಅವರು ಜಿಲ್ಲಾಧ್ಯಕ್ಷ ನವೀನಕುಮಾರ್ ಈ ಗುಳಗಣ್ಣವರ ಸೂಚನೆಯ ಮೇರೆಗೆ ಇವರನ್ನು ನಿಯುಕ್ತಿಗೊಳಿಸಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ರೋಹಿತ್ ಮಲ್ಲಾಡದ ಅವರು ನೂತನವಾಗಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವದಕ್ಕೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಯುವ ಮೋರ್ಚಾ ತಾಲೂಕು ಘಟಕಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.!!