ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಸರಳ ಆಚರಣೆ

ಶರಣು ಲಿಂಗನಬಂಡಿ

ಕೃಷಿಪ್ರಿಯ ನ್ಯೂಸ್ |

ಕುಷ್ಟಗಿ : ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿ ಹಿನ್ನೆಲೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ಪಟ್ಟಣ ಸೇರಿದಂತೆ ತಾಲೂಕಾದಾದ್ಯಂತ ಏ.14 ಭಾನುವಾರ ಸರಳವಾಗಿ ಆಚರಿಸಲಾಯಿತು.

ಪಟ್ಟಣದ ತಾಲೂಕಾಡಳಿತ ಕಚೇರಿಯ ಸಭಾಂಗಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಪೂಜಿಸಲಾಯಿತು. ತಹಸೀಲ್ದಾರ್ ರವಿ ಎಸ್. ಅಂಗಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ನೌಕರರು, ಸಿಬ್ಬಂದಿ ಪುಷ್ಪಾರ್ಚನೆ ಮಾಡಿ ಗೌರವಿಸಲಾಯಿತು.

ಬಳಿಕ ಮಾತನಾಡಿದ ತಹಸೀಲ್ದಾರ್ ರವಿ ಎಸ್. ಅಂಗಡಿ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಅವರು ದೇಶಕ್ಕೆ ಸಂವಿಧಾನವನ್ನು ನೀಡಿ ಸರ್ವರಿಗೂ ಸಮಾನತೆ ಕಲ್ಪಿಸಿದ ಆಧುನಿಕ ಪ್ರಜಾಪ್ರಭುತ್ವದ ಮಹಾನ್ ಶಿಲ್ಪಿ ಎನ್ನಿದ್ದಾರೆ. ಅವರು ನೀಡಿದ ಸಂವಿಧಾನದ ಆಶಯದಡಿ ಸರ್ವರೂ ನಡೆಯಬೇಕು ಎಂದರು.

ಅದೇರೀತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲ ಡಾ. ಎಸ್. ವಿ. ಡಾಣಿ ಅವರು, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಉಪನ್ಯಾಸಕರಾದ ಭೋಜರಾಜ ಎಸ್, ರವಿ ಹಾದಿಮನಿ, ಮಹಾಂತೇಶ ಗವಾರಿ, ಅಶೋಕ ಕೆಂಚರೆಡ್ಡಿ ಸೇರಿದಂತೆ ಇತರರಿದ್ದರು.

ಪುರಸಭೆ, ಆರೋಗ್ಯ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಕಚೇರಿಗಳು ಸೇರಿದಂತೆ ಇತರೆ ಸರ್ಕಾರಿ ವಿವಿಧ ಇಲಾಖೆಗಳಲ್ಲಿ ಹಾಗೂ ಸಂಘ-ಸಂಸ್ಥೆಗಳು ತಮ್ಮ ಕಚೇರಿ ಹಾಗೂ ವೃತ್ತಗಳಲ್ಲಿ ಗಣ್ಯರು, ಮುಖಂಡರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಪೂಜಿಸಿ ಗೌರವ ಸಮರ್ಪಿಸಿದರು.