ಕುಡಿಯುವ ನೀರಿಗಾಗಿ ಮತದಾನ ಬಹಿಷ್ಕಾರ !

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಹಲವು ವರ್ಷಗಳಿಂದ ಕುಡಿಯುವ ನೀರಿನ ಸೌಕರ್ಯವಿಲ್ಲದೇ ಬೆಸತ್ತ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ.

ಜಿಲ್ಲೆಯಲ್ಲಿಯೇ ಬಹುದೊಡ್ಡ ಗ್ರಾಮ ಪಂಚಾಯಿತಿ ಕೇಂದ್ರವಾಗಿ ಗುರುತಿಸಿಕೊಂಡಿರುವ ಈ ಹನುಮಸಾಗರ ಗ್ರಾಮದಲ್ಲಿನ 6ನೇ ವಾರ್ಡ್ ವಸ್ತ್ರದ ಲೇಔಟ್ ನಿವಾಸಿಗಳು ಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧಾರ ಕೈಗೊಂಡಿದ್ದಾರೆ. ಅಷ್ಟೇ ಅಲ್ಲದೆ ವಾರ್ಡಿನಲ್ಲಿ ನಾಮಫಲಕವನ್ನು ಅಳವಡಿಸಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಅನುಭವಿಸುತ್ತಿದ್ದು, ಇಲ್ಲಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಸಾಕಷ್ಟು ಬಾರಿ ಲಿಖಿತವಾಗಿ ಹಾಗೂ ಮೌಖಿಕವಾಗಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೂ ಕುಡಿಯುವ ನೀರಿನ ಸಮಸ್ಯೆಗೆ ಮುಂದಾಗದಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ನಿವಾಸಿಗಳಾದ ರಾಜೇಂದ್ರ ಪಂತ್, ಇಬ್ರಾಹಿಂ ಸಾಬ್, ನಾಗರಾಜ್ ಕಠಾರಿ, ಮೊಮ್ಮದ್ ರಫಿ, ಗೌರಮ್ಮ, ಮಲ್ಲನಗೌಡ ಸೇರಿ ಇತರರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.