ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿವೆ ಎಂಬ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿಯೋರ್ವಳು ಕ್ರಿಮಿನಾಶಕ ಸೇವಿಸಿ ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಯಲಬುರ್ತಿ ಗ್ರಾಮದ ವಿಜಯಲಕ್ಷ್ಮಿ ಹೊನ್ನಗೌಡ ಮಾಲಿಪಾಟೀಲ (19) ಮೃತ ವಿದ್ಯಾರ್ಥಿನಿ. ನಿರೀಕ್ಷಿತ ಫಲಿತಾಂಶ ಬಂದಿಲ್ಲ ಎಂದು ಖಿನ್ನತೆಗೊಳಗಾಗಿ ಮನೆಯಲ್ಲಿ ಯಾವುದೋ ಕ್ರಿಮಿನಾಶಕ ಔಷಧ ಸೇವಿಸಿ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಕುರಿತು ಕುಷ್ಟಗಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.