ಸಿಡಿಲು ಬಡಿದು ಯುವಕ ಸಾವು

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೊನಸಾಗರ ಗ್ರಾಮದ ಬಳಿ ಸೋಮವಾರ ಸಂಜೆ ನಡೆದಿದೆ.

ಗ್ರಾಮದ ಯುವಕ ಶ್ರೀನಿವಾಸ ಗೊಲ್ಲರ (16) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯ ಜಮೀನುಗಳಲ್ಲಿ ಕುರಿಗಳನ್ನು ಕಾಯುತ್ತಿದ್ದ ಸಂದರ್ಭದಲ್ಲಿ ಇಂದು ಸಂಜೆ ಬಿರುಗಾಳಿ ಸಹಿತ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಸುರಿದ ಮಳೆಯಲ್ಲಿ ಈ ಘಟನೆ ಸಂಭವಿಸಿದೆ. ಮತ್ತೋರ್ವ ವೃದ್ದ ಗಾಯಗೊಂಡಿದ್ದಾನೆ ಎಂಬ ಮಾಹಿತಿ ಸಾರ್ವಜನಿಕರಿಂದ ಲಭ್ಯವಾಗಿದೆ.