ಹೆಚ್ಚುತ್ತಿರುವ ತಾಪಮಾನ: ಸಾರ್ವಜನಿಕರು ಹವಾಮಾನ ಇಲಾಖೆಯ ಸಲಹೆ ಅನುಸರಿಸಿ – ತಹಸೀಲ್ದಾರ್ ರವಿ ಎಸ್. ಅಂಗಡಿ

ಕೃಷಿಪ್ರಿಯ ನ್ಯೂಸ್ |

ಕುಷ್ಟಗಿ : ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಭಾರತ ಹವಾಮಾನ ಇಲಾಖೆಯು ಸಲಹೆ ಸೂಚನೆಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅನುಸರಿಸಬೇಕು ಎಂದು ತಹಸೀಲ್ದಾರ್ ರವಿ ಎಸ್. ಅಂಗಡಿ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಈ ಕುರಿತು ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಬುಧವಾರ ಮಾಧ್ಯಮ ಮುಖಾಂತರ ಪ್ರಕಟಣೆ ಹೋರಡಿಸಿದ್ದು, ಪ್ರಸಕ್ತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯರಿಗೂ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಏಪ್ರಿಲ್ ಮಾಹೆಯಿಂದ ಮೇ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದ್ದು ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ನೀಡಿದೆ.

ಸಾರ್ವಜನಿಕರು ಅನುಸರಿಸಬೇಕಾದ ಸಲಹೆ, ಸೂಚನೆಗಳು:
ಸಾಧ್ಯವಾದಷ್ಟು ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ). ಕಾಲಕಾಲಕ್ಕೆ, ಸಾಕಷ್ಟು ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಬೇಕು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು). ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳ ಸೇವನೆ ತಪ್ಪಿಸಬೇಕು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಒಆರ್‌ಎಸ್ ಅನ್ನು ಕುಡಿಯಬೇಕು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಅವುಗಳಿಗೆ ಕುಡಿಯಲು ಸಾಕಷ್ಟು ನೀರನ್ನು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು ಹಾಗೂ ಆಗಿಂದಾಗ್ಗೆ ತಣ್ಣೀರು ಸ್ನಾನ ಮಾಡಬೇಕು. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ಕವರ್, ಎಲೆಕ್ಟೋಲೈಟ್ / ಗ್ಲೋಕೋಸ್ / ಒಆರ್‌ಎಸ್ ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯಬೇಕು.

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ:
ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅವುಗಳ ರೋಗ ಲಕ್ಷಣಗಳು ಈ ಕೆಳಕಂಡಂತಿವೆ:

ಶಾಖ ಸೆಳೆತಗಳು: ಎಡರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39ಲಿ ಸೆಲ್ಸಿಯಸ್ ಅಂದರೆ 102ಲಿ ಈ ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.

ಶಾಖದ ಬಳಲಿಕೆ: ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.

ಶಾಖಾಘಾತ: ದೇಹದ ಉಷ್ಣತೆಯು 40ಲಿ ಸೆಲ್ಸಿಯಸ್ ಅಂದರೆ 104ಲಿಈ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ: ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು, ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ವ್ಯಕ್ತಿ ಇನ್ನೂ ಪ್ರಜ್ಞೆ ಹೊಂದಿದ್ದರೆ ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‌ಎಸ್, ನಿಂಬೆ ಪಾನಕ ನೀಡಬೇಕು. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸಬೇಕು, ಸಾರ್ವಜನಿಕರು ಈ ಸಲಹೆಗಳನ್ನು ಪಾಲಿಸುವ ಮೂಲಕ ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಆಗುವ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಬೇಕು ಎಂದು ತಹಸೀಲ್ದಾರ್ ರವಿ ಎಸ್ ಅಂಗಡಿ ತಿಳಿಸಿದ್ದಾರೆ.