ಶರಣು ಲಿಂಗನಬಂಡಿ
ಕೃಷಿಪ್ರಿಯ ನ್ಯೂಸ್ |
ಕುಷ್ಟಗಿ :ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮ ಪಂಚಾಯಿತಿಯ ಮತಗಟ್ಟೆಯಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಕಾರ್ಯಕ್ರಮವನ್ನು ಭಾನುವಾರ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಶೈಲ ಪೊಲೀಶಿ ಚುನಾವಣಾ ಬಾವುಟ ದ್ವಜಾರೋಹಣ ನೇರವೇರಿಸಿ ಮಾತನಾಡಿದರು.
‘ಚುನಾವಣಾ ಆಯೋಗದ ನಿರ್ದೇಶನದಂತೆ ಜನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ‘ನಮ್ಮ ನಡೆ ಮತಗಟ್ಟೆ ಕಡೆ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು. ಬಳಿಕ ನರೇಗಾ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರ್ಮಿಕರಿಗೆ, ಶಾಲಾ ಆವರಣದ ಮತಗಟ್ಟೆ ಕೇಂದ್ರದ ಬಳಿ ಗ್ರಾಮಸ್ಥರಿಗೆ ಮತದಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಅದೇರೀತಿ ತಾಲೂಕಿನ ಹಿರೇನಂದಿಹಾಳ, ಕಂದಕೂರು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರಗಳ ಮತಗಟ್ಟೆಗಳಲ್ಲಿ ‘ನಮ್ಮ ನಡೆ ಮತಗಟ್ಟೆ ಕಡೆ’ ಜಾಗೃತಿ ಕಾರ್ಯಕ್ರಮ ನಡೆಸಿ ಭತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.