– ಜುಮಲಾಪುರ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವ ಸಿದ್ಧತೆ ಸಭೆ ಯಶಸ್ವಿ..!

– ಶರಣಪ್ಪ ಕುಂಬಾರ.

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪುರ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಸಭೆಯು ಮುಖ್ಯಗುರು ಸೋಮನಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು.

ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕರು ಸೇರಿದಂತೆ ಸಿಬ್ಬಂದಿಗೆ ಕೊರೋನ ನಿಯಮದಲ್ಲಿ ಜರಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಜೊತೆಗೆ ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮುಖ್ಯಗುರುಗಳು ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರಾದ ಸೋಮನಗೌಡ ಪಾಟೀಲ್ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟರು.
ಅಲ್ಲದೆ, ಭೌತಿಕ ಮಾಹಿತಿ ಜೊತೆಗೆ ಕೊಠಡಿ ಮೇಲ್ವಿಚಾರಣೆ ಕರ್ತವ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಯಿತು. ಕೊಠಡಿ ಮೇಲ್ವಿಚಾರಕ ಶಿಕ್ಷಕ ಸಿಬ್ಬಂದಿ, ಕಸ್ಟೋಡಿಯನ್ ಹಾಗೂ ಸ್ಕೌಟ್ಸ್ ಮಾಸ್ಟರ್, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಶಿಕ್ಷಕರು ಸಭೆಯಲ್ಲಿ ಭಾಗವಹಿಸಿದ್ದರು.