ಬಚನಾಳ | ಸಿಡಿಲು ಬಡಿದು ರೈತ ಸಾವು

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣೆದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚನಾಳ ಗ್ರಾಮದ ಸೀಮಾದಲ್ಲಿ ಭಾನುವಾರ ಸಂಜೆ ನಡೆದಿದೆ.

ಗ್ರಾಮದ ರೈತ ಈಶಪ್ಪ ತಂ. ಕರೆಡೆಪ್ಪ ಕಳಮಳ್ಳಿ (33) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಂಜೆ ಐದುಗಂಟೆ ಸುಮಾರಿಗೆ ಗುಡುಗು ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಕೃಷಿ ಚೆಟುವಟಿಕೆಯಲ್ಲಿ ನಿರತನಾಗಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.