ಸಿಡಿಲಿಗೆ ಸಾವನ್ನಪ್ಪಿದ ರೈತನ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಣೆ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣೆದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚನಾಳ ಗ್ರಾಮದ ಹೊರವಲಯ ಜಮೀನಿನಲ್ಲಿ ಇಂದು ಭಾನುವಾರ ಸಂಜೆ ಸಿಡಿಲು ಬಡಿದು ಮೃತಪಟ್ಟ ರೈತನ ಕುಟುಂಬಕ್ಕೆ ತಾಲೂಕಾಡಳಿತದಿಂದ ₹5 ಲಕ್ಷ ಪರಿಹಾರ ವಿತರಿಸಲಾಗಿದೆ.

ಗ್ರಾಮದ ರೈತ ಈಶಪ್ಪ ತಂ. ಕರೆಡೆಪ್ಪ ಕಳಮಳ್ಳಿ (33) ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತ ರತನಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದುಬಂದಿದೆ. ಘಟನಾ ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ರವಿ ಎಸ್. ಅಂಗಡಿ ಅವರು ಪರಿಶೀಲನೆ ಕಾರ್ಯನಡೆಸಿದ್ದರು. ನಂತರ ಮರಣೋತ್ತರ ಪರೀಕ್ಷೆ ಬಳಿಕ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ’ ಪ್ರಕೃತಿ ವಿಕೋಪ ಅಡಿಯಲ್ಲಿ ಸ್ಥಳದಲ್ಲೇ ₹5 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ್ದಾರೆ.

ಈ ವೇಳೆ ಗ್ರೇಡ್-2 ತಹಸೀಲ್ದಾರ್ ಮುರಳೀಧರ ಮುಕ್ತೆದಾರ, ಉಪತಹಸೀಲ್ದಾರ ಪ್ರಕಾಶ ನಾಯಕ, ಕಂದಾಯ ನಿರೀಕ್ಷಕ ಶರಣಪ್ಪ ದಾಸರ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು.