ಶೇಖರಗೌಡ ರಾಮತನಾಳಗೆ ಮಾತೃ ವಿಯೋಗ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಅರಳಹಳ್ಳಿ ಗ್ರಾಮದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತನಾಳ ಅವರ ತಾಯಿ ಹಿರಿಯ ಜೀವಿ ಶ್ರೀಮತಿ ಬಸಮ್ಮ ಗಂಗನಗೌಡ ರಾಮತನಾಳ (75) ಸೋಮವಾರ ರಾತ್ರಿ ನಿಧನರಾದರು.

ಮೃತರು ಒರ್ವ ಪುತ್ರ, ಸೊಸೆ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಸ್ವಗ್ರಾಮ ಹಿರೇಅರಳಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 1-00 ಗಂಟೆಗೆ ವೀರಶೈವ ಲಿಂಗಾಯತ ರುದ್ರ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತನಾಳ ಅವರ ತಾಯಿಗೆ ಆಯೋಗದ ಸದಸ್ಯರು, ಜನಪ್ರತಿನಿಧಿಗಳು, ಗ್ರಾಮಸ್ಥರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.