ದೇವದಾಸಿ ಪುನರ್ವಸತಿ ಯೋಜನೆ : ಫಲಾನುಭವಿಗಳ ಆಯ್ಕೆ ಸಮಿತಿ ಸಭೆಗೆ ಚಂದಾಲಿಂಗ ಕಲಾಲಬಂಡಿ ನೇಮಕ

ಸಂಗಮೇಶ ಮುಶಿಗೇರಿ

ಕೃಷಿಪ್ರಿಯ ನ್ಯೂಸ್ |

ಕೊಪ್ಪಳ : ದೇವದಾಸಿ ಪುನರ್ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಗೆ ವಿಶೇಷ ಆಹ್ವಾನಿತರನ್ನಾಗಿ ಜಿಲ್ಲೆಯ ಕುಷ್ಟಗಿ ತಾಲೂಕಾ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಸಂಚಾಲಕ ಚಂದಾಲಿಂಗ ಕಲಾಲಬಂಡಿ ಅವರನ್ನು ನೇಮಕ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ಆಯ್ಕೆ ಸಮಿತಿ ಸಭೆ ಸದಸ್ಯ ಕಾರ್ಯದರ್ಶಿಗಳು ಈ ಕುರಿತು ಜೂ.1ರಂದು ಆದೇಶ ಹೊರಡಿಸಿದ್ದಾರೆ. ದೇವದಾಸಿ ಪುನರ್ವಸತಿ ಯೋಜನೆಯಡಿ ಆದಾಯೋತ್ಪನ್ನಕರ ಚಟುವಟಿಕೆ ಸೌಲಭ್ಯ ಮತ್ತು ವಸತಿ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ವಾರ್ಷಿಕ ಕ್ರಿಯಾಯೋಜನೆಯಂತೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿ ಸಭೆಯನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ಸಮಿತಿ ಸಭೆಗೆ ಚಂದಾಲಿಂಗ ಕಲಾಲಬಂಡಿ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.