ಸಂಗಮೇಶ ಮುಶಿಗೇರಿ
ಕೃಷಿಪ್ರಿಯ ನ್ಯೂಸ್ |
ಕೊಪ್ಪಳ : ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ರೈತ ಸೇರಿದಂತೆ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಿಕ್ಕ ತೆಮ್ಮಿನಾಳ ಸೀಮಾದ ಜಮೀನೊಂದರಲ್ಲಿ ಭಾನುವಾರ ನಡೆದಿದೆ.
ತಾವರಗೇರಾ ಹೋಬಳಿ ಮೆಣೆದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ತೆಮ್ಮಿನಾಳ ಗ್ರಾಮದ ರೈತ ಬಸಪ್ಪ ತಂದಿ ಯಂಕಪ್ಪ (45) ಸಾವಿಗೀಡಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಮೆಣದಾಳ ಸೀಮಾದ ಸ.ನಂ. 92ರ ಜಮೀನಿನಲ್ಲಿ ರೈತ ಎತ್ತಿನೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಷಯ ತಿಳಿದ ಶಾಸಕ ದೊಡ್ಡನಗೌಡ ಎಚ್. ಪಾಟೀಲ್ ಅವರು ತಾವರಗೇರಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.