ಕೇಸೂರು | ಗ್ರಾ.ಪಂ. ಉಪಾಧ್ಯಕ್ಷರಾಗಿ ಹೇಮಾವತಿ ಗೋಪಾಲ ನಾಯಕ ಅವಿರೋಧ

ಕೃಷಿಪ್ರಿಯ..
ಸುದ್ದಿ ಸಮರ್ಪಣ |

ಕುಷ್ಟಗಿ : ರಾಜೀನಾಮೆಯಿಂದ ತೆರವಾಗಿದ್ದ ತಾಲೂಕಿನ ಕೇಸೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಡುವಲಕೊಪ್ಪದ ಹೇಮಾವತಿ ಗಂಡ ಗೋಪಾಲ ನಾಯಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡರ್ ಘೋಷಣೆ ಮಾಡಿದರು.

ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಒಟ್ಟು 16 ಜನ ಗ್ರಾಮ ಪಂಚಾಯಿತಿ ಸದಸ್ಯರ ಪೈಕಿ 15 ಜನ ಹಾಜರಿದ್ದರು. ಪ್ರತಿಸ್ಪರ್ಧಿ ಇರದ ಹಿನ್ನೆಲೆ ಉಪಾಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಇದ್ದುದರಿಂದ ಹೇಮಾವತಿ ನಾಯಕ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುತ್ತಿದ್ದಂತೆ ನೂತನ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಲಾಯಿತು. ಅಧಿಕಾರ ಸ್ವೀಕರಿಸಿ ಉಪಾಧ್ಯಕ್ಷೆ ಹೇಮಾವತಿ ಮಾತನಾಡಿ, ನಾವು ಜನರ ಸೇವಕರು. ಜನರ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲಾ ಮಲ್ಲಿಕಾರ್ಜುನ ಪಾಟೀಲ್, ಅಭಿವೃದ್ಧಿ ಅಧಿಕಾರಿ ಅಮಿನಸಾಬ್, ಸದಸ್ಯರಾದ ರಮೇಶ ಗಡಾದ ಕಡೇಕೊಪ್ಪ, ಈರಪ್ಪ ಕಡೇಕೊಪ್ಪ, ಉಮೇಶ ಕೇಸೂರು, ಗುರುನಗೌಡ ಕಲಕೇರಿ ಹಾಗೂ ಸಿಬ್ಬಂದಿ ಹಾಜರಿದ್ದರು.