ಸುದ್ದಿ ಸಮರ್ಪಣ |
ಕುಷ್ಟಗಿ : ನಸೀಬಿನ ಆಟ ಅಂದರ-ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ನಡೆಸಿ 9 ಜನರನ್ನು ಬಂಧಿಸಿದ ಘಟನೆ ತಾಲೂಕಿನ ಕಲಾಲಬಂಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗ್ರಾಮದ ಕೆರೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಭಾರಿ ಮೊತ್ತದ ಇಸ್ಪೀಟ್ ಜೂಜಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪಿಎಸ್’ಐ ಮುದ್ದುರಂಗಸ್ವಾಮಿ ಹಾಗೂ ಪೊಲೀಸ್ ಸಿಬ್ಬಂದಿ ಒಳಗೊಂಡ ತಂಡ ಮಿಂಚಿನ ದಾಳಿ ನಡೆಸಿದೆ. ದಾಳಿ ವೇಳೆ 09 ಜನರನ್ನು ಬಂಧಿಸಿ ಅವರ ಬಳಿಯಿದ್ದ 2,22,490 ರೂಪಾಯಿ ಹಾಗೂ ಜೂಜಾಟಕ್ಕೆ ಬಳಸಿದ ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತರ ಮೇಲೆ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.