ಸಂಗಮೇಶ ಮುಶಿಗೇರಿ
ಸುದ್ದಿ ಸಮರ್ಪಣ |
ಕೊಪ್ಪಳ : ಪ್ರಧಾನಮಂತ್ರಿ ನರೆಂದ್ರ ಮೋದಿ ನೇತೃತ್ವದ 03 ನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಭವಿಷ್ಯದ ಸುಧಾರಣೆಗಳಿಗೆ ಒತ್ತು ನೀಡುವ ಉತ್ತಮ ಬಜೆಟ್ ಆಗಿದೆ ಎಂದು ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಎಚ್.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಂಗಳವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಸಂಸತ್ತಿನಲ್ಲಿ ಸತತ 07 ನೇ ಬಾರಿಗೆ ಜನಾನುರಾಗಿ ಬಜೆಟ ಮಂಡಿಸುವುದರ ಮೂಲಕ ದಾಖಲೆ ಬರೆದಿದ್ದಾರೆ ಎಂದು ಬಣ್ಣಿಸಿರುವ ಶಾಸಕರು, ಕೇಂದ್ರ ಮಂಡಿಸಿದ ಸರ್ವಸ್ಪರ್ಶಿ ಸಮದರ್ಶಿ ಬಜೆಟ್ ಆಗಿದೆ. ಕೃಷಿ ಕ್ಷೇತ್ರ, ಸಾಮಾಜಿಕ ನ್ಯಾಯ, ಉದ್ಯೋಗ, ಉತ್ಪಾದನೆ ಹಾಗೂ ಸೇವಾ ಕ್ಷೇತ್ರ, ನಗರಾಭಿವೃದ್ಧಿ, ಮಹಿಳೆ, ಯುವಕರು ಹಾಗೂ ರೈತರ ಬಲವರ್ಧನೆ, ಶಕ್ತಿಮೂಲಗಳ ಬಲವರ್ಧನೆ, ಸಂಶೋಧನಾ ಕ್ಷೇತ್ರಕ್ಕೆ ನೀಡಿದ ಆದ್ಯತೆ, ಭವಿಷ್ಯದ ಸುಧಾರಣೆಗಳಿಗೆ ಒತ್ತು ನೀಡುವ ಮೂಲಕ ಕೇಂದ್ರ ಸರ್ಕಾರ ಉತ್ತಮ ಬಜೆಟ್ ಮಂಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.