– ಶರಣಪ್ಪ ಕುಂಬಾರ.
ಕೊಪ್ಪಳ : ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರನ್ನ ಸೌಹಾರ್ದಯುತವಾಗಿ ಭೇಟಿಯಾಗಿ ಅವರೊಂದಿಗೆ ಕೆಲ ಸಮಯ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು..!
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬೊಮ್ಮಾಯಿಯವರು ಬೆಂಗಳೂರಿನಲ್ಲಿರುವ ದೇವೇಗೌಡರ ಮನೆಗೆ ತೆರಳಿ ಸೌಹಾರ್ದಯುತ ಭೇಟಿ ನೀಡಿದ್ದಾರೆ. ಯಾವುದೇ ತರಹದ ರಾಜಕೀಯ ಉದ್ದೇಶವಿಲ್ಲದ ಭೇಟಿ ಅಲ್ಲವೆಂಬುದು ಸ್ಪಷ್ಟವಾಗಿದೆ. ಆದರೆ, ಬೊಮ್ಮಾಯಿ ಅವರು ಮೂಲತಃ ಜನತಾದಳ ಪರಿವಾರದ ಮೂಲದವರು ಎಂಬುದು ಕೂಡಾ ಚರ್ಚಗೆ ಮುಖ್ಯ ಕಾರಣವಾಗಿದೆ. ಹಿರಿಯ ರಾಜಕೀಯ ಚತುರ ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಸಮಯದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಉಪಸ್ಥಿತರಿದ್ದರು..!!