ಸಂಗಮೇಶ ಮುಶಿಗೇರಿ
ಸುದ್ದಿ ಸಮರ್ಪಣ |
ಕೊಪ್ಪಳ : ಅಪಘಾತಗಳಿಂದಾಗುವ ಅನಾಹುತ ತಪ್ಪಿಸಲು ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಆಗಸ್ಟ್ 01 ರಿಂದ ಬೈಕ್ ಸವಾರರಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಪ್ರಯಾಣಿಸಲು ತಿಳಿಸಿದೆ.
ಈ ಕುರಿತು ಕೊಪ್ಪಳ ಎಸ್.ಪಿ. ಡಾ. ರಾಮ. ಎಲ್. ಅರಸಿದ್ದಿ ಅವರು ಮಾಧ್ಯಮ ಮೂಲಕ ಪ್ರಕಟಣೆ ಹೊರಡಿಸಿದ್ದಾರೆ. ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧಾರಣೆ ಮಾಡುವುದನ್ನು ಕಾರ್ಯಗತಗೊಳಿಸಲಾಗುತಿದ್ದು. ಜಿಲ್ಲೆಯ ಜನತೆ ಸಹಕರಿಸಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ವಿನಂತಿಸಿದ್ದಾರೆ. ಆಗಸ್ಟ್ 01 ರಿಂದ ಜಿಲ್ಲೆಯಾದ್ಯಂತ ಪೊಲೀಸ್ ಅಧಿಕಾರಿಗಳು ಹೆಲ್ಮೆಟ್ ಕಡ್ಡಾಯ ಕಾರ್ಯಗತಗೊಳಿಸಲು ಕಾರ್ಯಾ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ.