ಕುಷ್ಟಗಿ | ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮಾನ – ಡಿ.ಎಚ್.ಒ. ಡಾ.ಟಿ.ಲಿಂಗರಾಜು

ಸಂಗಮೇಶ ಮುಶಿಗೇರಿ

ಸುದ್ದಿ ಸಮರ್ಪಣ |

ಕುಷ್ಟಗಿ : ಮಗುವಿಗೆ ಎದೆಹಾಲು ಉಣಿಸುವುದರಿಂದ ತಾಯಿಯ ಸೌಂದರ್ಯ ಹಾಳಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ. ಲಿಂಗರಾಜು ಅವರು ಹೇಳಿದರು.

ಅವರು ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಸಭಾಂಗಣದಲ್ಲಿ ಶುಕ್ರವಾರ ಆರೋಗ್ಯ ಇಲಾಖೆಯಿಂದ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜ್ಞಾನ ಸಾಕಷ್ಟು ಮುಂದುವರೆದಿದ್ದರೂ ತಾಯಿಯ ಎದೆ ಹಾಲನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ಎದೆ ಹಾಲಿ ನಲ್ಲಿರುವ ಪೌಷ್ಟಿಕಾಂಶವು ಮಗುವಿಗೆ ದೊರಕಿದರೆ ಮಗು ಆರೋಗ್ಯವಾಗಿ ಬೆಳೆಯುತ್ತದೆ. ಎದೆಹಾಲು ಅಮೃತಕ್ಕೆ ಸಮಾನವಾಗಿದೆ ಎಂದು ಎದೆ ಹಾಲಿನ ಮಹತ್ವ ಕುರಿತು ವಿವರವಾಗಿ ತಿಳಿಸಿದರು.

ಆಸ್ಪತ್ರೆ ಆಡಳಿತಾಧಿಕಾರಿ ಡಾ. ಕೆ.ಎಸ್. ರೆಡ್ಡಿ ಅವರು ಮಾತನಾಡಿ, ಜನನವಾದ ಮಗುವಿಗೆ ಆರು ತಿಂಗಳುಕಾಲ ತಾಯಂದಿರು ಎದೆಹಾಲು ಹೊರತುಪಡಿಸಿ ಬೇರೆ ಏನನ್ನೂ ಉಣಿಸಬಾರದು. ಮಗುವಿನ ಸದೃಢ ಆರೋಗ್ಯ ವೃದ್ಧಿಗೆ ತಾಯಿಯ ಎದೆಹಾಲು ಶ್ರೇಷ್ಠವಾಗಿದೆ ಎಂದು ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ರವೀಂದ್ರನಾಥ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿಗಳು, RCH ಅಧಿಕಾರಿಗಳು, ತಾಲೂಕ ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರು, ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿಗಳು ಸೇರಿದಂತೆ ತಾಯಂದಿರು ಹಾಗೂ ಆಶಾ  ಕಾರ್ಯಕರ್ತರು ಮತ್ತು ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.