ಕುಷ್ಟಗಿ : ವಿಧ್ಯಾರ್ಥಿಗಳು ರಾಷ್ಟೀಯ ಸಂಪನ್ಮೂಲ ವಾಗಲು ಮೊದಲು ಅಧಿಕಾರಿಗಳು ಸಾಮರ್ಥ್ಯ ಪಡೆದಾಗ ಮಾತ್ರ ಸಾಧ್ಯ ಎಂದು ರಾಷ್ಟ್ರೀಯ ಸೇವಾಯೋಜನೆ ವಿಭಾಗೀಯ ಸಂಯೋಜನಾಧಿಕಾರಿ ಪ್ರಾಚಾರ್ಯ ಬಸಪ್ಪ ನಾಗೋಲಿ ಅವರು ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಘಟಕದ ವತಿಯಿಂದ ಕೊಪ್ಪಳ ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಸೇವಾಯೋಜನೆಯ ಕಾರ್ಯಕ್ರಮ ಅಧಿಕಾರಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಇಂತಹ ಕಾರ್ಯಾಗಾರಗಳು ನಮಗೆ ತಿಳುವಳಿಕೆ ನೀಡಿ ನಾವು ಆಯಾ ಕಾಲಕ್ಕೆ ಹೇಗೆ ಸ್ಪಂದಿಸಬಹುದೆಂಬುದನ್ನು ನಮಗೆ ತಿಳಿಸಿಕೊಡುತ್ತವೆ. ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಾಯಚೂರು ಜಿಲ್ಲೆಯ ನೋಡಲ್ ಅಧಿಕಾರಿ ಸಿದ್ದನಗೌಡರ ಅವರು ಮಾತನಾಡಿ, ರಾಷ್ಟ್ರೀಯ ಸೇವಾಯೋಜನೆ ಬೆಳೆದು ಬಂದ ಹಾದಿ ಬಗ್ಗೆ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ನೋಡಲ್ ಅಧಿಕಾರಿ ಕೆ. ಟಿ. ಕುಮಾರಸ್ವಾಮಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಮಾಲಾ ಪಿ. ಅವರು ಮಾತನಾಡಿದರು. ರಾಷ್ಟ್ರೀಯ ಸೇವಾಯೋಜನೆ ಕೊಪ್ಪಳ ಜಿಲ್ಲಾ ನೋಡಲ್ ಅಧಿಕಾರಿ ಡಾ. ನಾಗರಾಜ ಹೀರಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಷ್ಟ್ರೀಯ ಸೇವಾಯೋಜನೆ ಸ್ವಯಂ ಸೇವಕ ವಿಧ್ಯಾರ್ಥಿಗಳು ರಾಷ್ಟ್ರೀಯ ಸೇವಾಯೋಜನೆ ಗೀತೆ ಹಾಡಿದರು. ರಾಷ್ಟ್ರೀಯ ಸೇವಾಯೋಜನೆ ಸಲಹಾ ಸಮಿತಿ ಸಮಿತಿ ಸದಸ್ಯ ಹನುಮೇಶ ಡಬೇರ್ ಉಪಸ್ಥಿತಿ ವಹಿಸಿದ್ದರು. ಉಪನ್ಯಾಸಕರಾದ ಹನುಮಂತಪ್ಪ ಚೌದ್ರಿ, ದಾದಾಪೀರ, ರಾಜಶೇಖರ, ಬಲರಾಮ ಜೋಷಿ, ಸಂತೋಷ ಕುಮಾರ್ ಹಾಗೂ ಎಲ್ಲಾ ಅತಿಥಿ ಉಪನ್ಯಾಸಕರು ಹಾಜರಿದ್ದರು.
ಕಾರ್ಯಗಾರದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು ಹದಿನೇಳು ರಾಷ್ಟ್ರೀಯ ಸೇವಾಯೋಜನೆ ಘಟಕದ ಅಧಿಕಾರಿಗಳು ಭಾಗವಹಿಸಿದ್ದರು. ಕುಷ್ಟಗಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿ. ಪಿ. ಕುಲಕರ್ಣಿ ಸ್ವಾಗತಿಸಿದರು. ಉಪನ್ಯಾಸಕ ಮಲ್ಲಿಕಾರ್ಜುನ ನಿರೂಪಿಸಿದರು. ಯಲಬುರ್ಗಾ ಕಾರ್ಯಕ್ರಮ ಅಧಿಕಾರಿ ಚೆಗರೆಡ್ಡಿ ವಂದಿಸಿದರು. ಕಾರ್ಯಕ್ರಮದ ಬಳಿಕ ಡಾ. ನಾಗರಾಜ ಹೀರಾ ಇವರು ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.