– ಶರಣಪ್ಪ ಕುಂಬಾರ.
ಕೊಪ್ಪಳ : ಕೊರೋನಾ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ 9 ನೇ ತರಗತಿಯಿಂದ ಕಾಲೇಜು ತರಗತಿಗಳ ಆರಂಭಕ್ಕೆ ರಾಜ್ಯ ಸರಕಾರ ತಡವಾಗಿ ಗ್ರೀನ್ ಸಿಗ್ನಲ್ ನೀಡಿದೆ. ಆದರೆ, ಇದಕ್ಕೆ ಪೂರಕವಾಗಿರುವ ಹಾಸ್ಟೆಲ್ ಗಳನ್ನು ಆರಂಭಿಸದಿರುವುದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ..!
ಎಲ್ಲಾ ಅಳೆದು ತೂಗಿ, ತಜ್ಞರ ಅಭಿಪ್ರಾಯದ ಮೇರೆಗೆ ತರಗತಿಗಳ ಆರಂಭದ ಆದೇಶದ ಜೊತೆಗೆ ವಿವಿಧ ಹಾಸ್ಟೆಲ್ ಗಳನ್ನು ಆರಂಭಿಸಬೇಕು ಎಂಬ ನಿರ್ಧಾರವನ್ನು ಸರಕಾರ ಏತಕ್ಕೆ ತೆಗೆದುಕೊಳ್ಳಲಿಲ್ಲ ಎಂಬುದಾಗಿ ವಿದ್ಯಾರ್ಥಿಗಳು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಶಾಲಾ-ಕಾಲೇಜುಗಳ ಜೊತೆಗೆ ಹಾಸ್ಟೆಲ್ ಗಳ ಆರಂಭಕ್ಕೆ ರಾಜ್ಯ ಸರಕಾರ ಆದೇಶಿಸಿ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಜೀವನಕ್ಕೆ ಆಸರೆಯಾಗಬೇಕಾಗಿದೆ..!!