– ಶರಣಪ್ಪ ಕುಂಬಾರ.
ಕೊಪ್ಪಳ : ಪಕ್ಕದ ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಬಿ.ಎಂ.ಜೆ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಆಯುಷ್ಯ ಪದ್ಧತಿ ಮತ್ತು ಔಷಧಿ ಸಸ್ಯಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿದ ಗದಗ ಜಿಲ್ಲಾ ಆಯುಷ್ಯ ಇಲಾಖೆ ಹಿರಿಯ ಅಧಿಕಾರಿ ಡಾ.ಎಂ.ಎಸ್.ಉಪ್ಪಿನ ಮಾತನಾಡಿ, ವಿದ್ಯಾರ್ಥಿಗಳಿಗೆ ಔಷಧಿ ಸಸ್ಯಗಳ ಪರಿಚಯ ಅವುಗಳ ಉಪಯೋಗದ ಅರಿವು ಅವಶ್ಯಕತೆಯಿದೆ ಎಂದರು. ಭಾರತೀಯ ಮೂಲದ ಆಯುಷ್ಯ ಪದ್ಧತಿಗೆ ಹೆಚ್ಚಿನ ಪ್ರಾಶಸ್ತ್ಯ ಲಭಿಸಬೇಕಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ವಿವಿಧ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಆಯುಷ್ ಪದ್ಧತಿ ಮತ್ತು ಔಷಧಿ ಸಸ್ಯಗಳ ಬಗ್ಗೆ ವರ್ಷವಿಡೀ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಪ್ರಾಚಾರ್ಯ ಡಾ.ಎನ್.ಹೆಚ್.ಕುಲಕರ್ಣಿ ಅಧ್ಯಕ್ಷತೆವಹಿಸಿದ್ದರು. ಸ್ಥಳೀಯ ಪೊಲೀಸ್ ಠಾಣೆ ಪಿ.ಎಸ್.ಐ ಗುರುಶಾಂತ ದಾಷ್ಯಾಳ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿವಿಧ ಗ್ರಾಮಗಳ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.