– ಬಸ್ ಸಂಚಾರಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಬಸ್ ತಡೆ..!

 

– ಶರಣಪ್ಪ ಕುಂಬಾರ.

ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಪರಮನಹಟ್ಟಿ ಹಾಗೂ ಕೋನಾಪೂರ ಗ್ರಾಮದ ಶಾಲಾ ವಿದ್ಯಾರ್ಥಿಗಳು ತಮ್ಮ ಗ್ರಾಮಗಳಿಗೆ ಬಸ್ ಸಂಚಾರಕ್ಕೆ ಒತ್ತಾಯಿಸಿ ಜಾಗೀರ ಗುಡದೂರು ಗ್ರಾಮದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಜಾಗೀರ ಗುಡದೂರ ಗ್ರಾಮದ ಪ್ರೌಢ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ನಿತ್ಯ 4 ಕಿ.ಮೀ ದೂರವನ್ನು ನಡೆದುಕೊಂಡು ಆಗಮಿಸುವ ವಿದ್ಯಾರ್ಥಿಗಳು ಬಸ್ ಸಂಚಾರಕ್ಕೆ ಒತ್ತಾಯಿಸಿದ್ದಾರೆ. ಒಂದು ದಿನ ಮಾತ್ರ ಬಸ್ ಸಂಚಾರಕ್ಕೆ ಮುಂದಾಗಿರುವ ಕುಷ್ಟಗಿ ಬಸ್ ಡಿಪೋ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಕಿಡಿಕಾರಿದರು. ನಿತ್ಯ ಎರಡು ಸಮಯ ಬಸ್ ಸಂಚಾರಕ್ಕೆ ಒತ್ತಾಯಿಸಲಾಗಿತು. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.